Spiritual and Physical Therapy

Spiritual and Physical Therapy

2- "ನಾಳೆ ನಾನು ಈ ಪತಾಕೆಯನ್ನು ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು. ಅವನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತಾನೆ ಮತ್ತು ಅಲ್ಲಾಹು ಮತ್ತು ಅವನ ಸಂದೇಶವಾಹಕರು ಅವನನ್ನು ಪ್ರೀತಿಸುತ್ತಾರೆ." ಪತಾಕೆ ಯಾರ ಕೈಗೆ ಕೊಡಲಾಗಬಹುದು ಎಂದು ಮಾತನಾಡುತ್ತಾ ಜನರು ಆ ರಾತ್ರಿಯನ್ನು ಕಳೆದರು. ಬೆಳಗಾದಾಗ, ಜನರೆಲ್ಲರೂ ಅದನ್ನು ತಮ್ಮ ಕೈಗೆ ಕೊಡಲಾಗಬಹುದೆಂಬ ನಿರೀಕ್ಷೆಯಿಂದ ಬೆಳಗ್ಗೆಯೇ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ತೆರಳಿದರು. ಅವರು (ಪ್ರವಾದಿ) ಕೇಳಿದರು: "ಅಲೀ ಬಿನ್ ಅಬೂ ತಾಲಿಬ್ ಎಲ್ಲಿ?" ಅವರು ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ಕಣ್ಣ ನೋವಿನಿಂದ ಬಳಲುತ್ತಿದ್ದಾರೆ." ಅವರು ಹೇಳಿದರು: "ಅವನ ಬಳಿಗೆ ಜನರನ್ನು ಕಳುಹಿಸಿ." ಅವರು ಬಂದಾಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಎರಡು ಕಣ್ಣುಗಳಿಗೆ ಉಗಿದು ಪ್ರಾರ್ಥಿಸಿದರು. ಆಗ ಅವರ ಕಣ್ಣಿನಲ್ಲಿ ಯಾವುದೇ ನೋವಿರಲಿಲ್ಲವೋ ಎಂಬಂತೆ ಅದು ಗುಣವಾಯಿತು. ಅವರು ಪತಾಕೆಯನ್ನು ಅವರಿಗೆ ಕೊಟ್ಟರು. ಅಲಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ನಮ್ಮಂತೆ ಆಗುವ ತನಕ ನಾನು ಅವರೊಂದಿಗೆ ಯುದ್ಧ ಮಾಡಬೇಕೇ?" ಅವರು ಉತ್ತರಿಸಿದರು: "ಅವರ ಅಂಗಳವನ್ನು ತಲುಪುವ ತನಕ ಸಾವಧಾನದಿಂದ ಮುಂದುವರಿಯಿರಿ. ನಂತರ ಅವರನ್ನು ಇಸ್ಲಾಂ ಧರ್ಮಕ್ಕೆ ಕರೆಯಿರಿ. ಅಲ್ಲಾಹನ ಹಕ್ಕಿಗೆ ಸಂಬಂಧಿಸಿದಂತೆ ಅವರಿಗೆ ಏನು ಕಡ್ಡಾಯವಾಗಿದೆಯೆಂಬುದನ್ನು ತಿಳಿಸಿಕೊಡಿ.@ಏಕೆಂದರೆ, ಅಲ್ಲಾಹನಾಣೆ! ಅಲ್ಲಾಹು ನಿನ್ನ ಮೂಲಕ ಒಬ್ಬ ವ್ಯಕ್ತಿಗೆ ಸನ್ಮಾರ್ಗವನ್ನು ಕರುಣಿಸುವುದು ನಿನಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ."