Principles of Islamic Jurisprudence

Principles of Islamic Jurisprudence

2- "ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ*. ಇವೆರಡರ ಮಧ್ಯೆ ಸಂಶಯಾಸ್ಪದ ವಿಷಯಗಳಿವೆ. ಜನರಲ್ಲಿ ಹೆಚ್ಚಿನವರಿಗೂ ಅವುಗಳ ಬಗ್ಗೆ ಜ್ಞಾನವಿಲ್ಲ. ಯಾರು ಈ ಸಂಶಯಾಸ್ಪದ ವಿಷಯಗಳಿಂದ ದೂರವಿರುತ್ತಾನೋ, ಅವನು ತನ್ನ ಧರ್ಮ ಮತ್ತು ಘನತೆಯನ್ನು ಕಾಪಾಡಿಕೊಂಡನು. ಯಾರು ಈ ಸಂಶಯಾಸ್ಪದ ವಿಷಯಗಳಲ್ಲಿ ಒಳಪಡುತ್ತಾನೋ ಅವನು ಹರಾಮ್‌ನಲ್ಲಿ ಒಳಪಡುತ್ತಾನೆ. ಅವನ ಸ್ಥಿತಿಯು (ಪ್ರವೇಶಾನುಮತಿಯಿಲ್ಲದ) ಹುಲ್ಲುಗಾವಲಿನ ಅಂಚಿನಲ್ಲಿ ತನ್ನ ಕುರಿಮಂದೆಯನ್ನು ಮೇಯಿಸುವ ಒಬ್ಬ ಕುರಿಗಾಹಿಯಂತೆ. ಅವನ ಕುರಿಗಳು ಹುಲ್ಲುಗಾವಲಿನೊಳಗೆ ನುಗ್ಗಿ ಮೇಯುವ ಸಾಧ್ಯತೆಯಿದೆ. ಎಚ್ಚರಾ! ಪ್ರತಿಯೊಬ್ಬ ರಾಜನಿಗೂ ಒಂದು (ನಿಷೇಧಿತ) ವಲಯವಿದೆ. ಎಚ್ಚರಾ! ಅಲ್ಲಾಹು ನಿಷೇಧಿಸಿದ ಕಾರ್ಯಗಳು ಅವನ (ನಿಷೇಧಿತ) ವಲಯವಾಗಿದೆ. ಎಚ್ಚರಾ! ದೇಹದಲ್ಲಿ ಒಂದು ಮಾಂಸದ ತುಂಡಿದೆ. ಅದು ಸರಿಯಾದರೆ ಸಂಪೂರ್ಣ ದೇಹವು ಸರಿಯಾಗುತ್ತದೆ. ಅದು ಕೆಟ್ಟರೆ ಸಂಪೂರ್ಣ ದೇಹವು ಕೆಡುತ್ತದೆ. ಎಚ್ಚರಾ! ಅದು ಹೃದಯವಾಗಿದೆ."