ನಮಾಝ್
8- ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬುದು ಇಲ್ಲಾ ಇಯ್ಯಾಹು, ಲಹು ನ್ನಿಅ್‌ಮತು ವಲಹುಲ್ ಫದ್ಲು, ವಲಹು ಸ್ಸನಾಉಲ್ ಹಸನು, ಲಾ ಇಲಾಹ ಇಲ್ಲಲ್ಲಾಹು ಮುಖ್ಲಿಸೀನ ಲಹು ದ್ದೀನ ವಲವ್ ಕರಿಹಲ್ ಕಾಫಿರೂನ್." (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. ಅಲ್ಲಾಹನ ಹೊರತು ಶಕ್ತಿಯಾಗಲಿ ಸಾಮರ್ಥ್ಯವಾಗಲಿ ಇಲ್ಲ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ನಾವು ಅವನನ್ನಲ್ಲದೆ ಇನ್ನಾರನ್ನೂ ಆರಾಧಿಸುವುದಿಲ್ಲ. ಅನುಗ್ರಹವು ಅವನದ್ದು, ಔದಾರ್ಯವು ಅವನದ್ದು ಮತ್ತು ಉತ್ತಮವಾದ ಪ್ರಶಂಸೆಯು ಅವನಿಗೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಸತ್ಯನಿಷೇಧಿಗಳು ಅಸಹ್ಯಪಟ್ಟರೂ ಸಹ ನಾವು ಧರ್ಮವನ್ನು ಅವನಿಗೆ ನಿಷ್ಕಳಂಕಗೊಳಿಸುತ್ತೇವೆ). ನಂತರ ಅವರು ಹೇಳಿದರು: "@ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು."
29- "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು*: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು." (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ. ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ).
ಇನ್ನೊಂದು ವರದಿಯಲ್ಲಿ: "ನಿಶ್ಚಯವಾಗಿಯೂ ಅಲ್ಲಾಹು ಶಾಂತಿಯಾಗಿದ್ದಾನೆ. ಆದ್ದರಿಂದ ನಿಮ್ಮಲ್ಲೊಬ್ಬರು ನಮಾಝಿನಲ್ಲಿ ಕುಳಿತುಕೊಳ್ಳುವಾಗ ಹೀಗೆ ಹೇಳಲಿ: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ). ಹೀಗೆ ಹೇಳಿದರೆ ಭೂಮ್ಯಾಕಾಶಗಳಲ್ಲಿರುವ ಅಲ್ಲಾಹನ ಎಲ್ಲಾ ನೀತಿವಂತ ದಾಸರಿಗೂ ಅದು ಅನ್ವಯಿಸುತ್ತದೆ. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು. (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ನಂತರ ಅವರಿಗೆ ಇಷ್ಟವಾದ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು."