Endowment

1- "ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು.* ನಂತರ ಅವನ ಪಾರ್ಶ್ವ, ಹಣೆ ಮತ್ತು ಬೆನ್ನುಗಳಿಗೆ ಅದರಿಂದ ಬರೆ ಹಾಕಲಾಗುವುದು. ಅವು ತಣ್ಣಗಾದಾಗಲೆಲ್ಲಾ ಅದನ್ನು ಪುನಃ ಕಾಯಿಸಲಾಗುವುದು. ಐವತ್ತು ಸಾವಿರ ವರ್ಷಗಳಷ್ಟು ದೀರ್ಘವಾದ ದಿನದಂದು ಅಲ್ಲಾಹು ಅವನ ದಾಸರ ಮಧ್ಯೆ ತೀರ್ಪು ನೀಡಿ ಮುಗಿಸುವ ತನಕ ಇದು ಮುಂದುವರಿಯುವುದು. ನಂತರ ಅವನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಅವನ ದಾರಿಯನ್ನು ಕಂಡುಕೊಳ್ಳುವನು."