Jurisprudence of Ethics

Jurisprudence of Ethics

1- "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?*" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.

3- “ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ*” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”

6- "ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ*. ಆದ್ದರಿಂದ ನೀವು (ಪ್ರತೀಕಾರಕ್ಕಾಗಿ) ಕೊಲ್ಲುವಾಗ ಉತ್ತಮ ರೀತಿಯಲ್ಲಿ ಕೊಲ್ಲಿರಿ. ನೀವು (ಪ್ರಾಣಿಗಳನ್ನು ಮಾಂಸಕ್ಕಾಗಿ) ಕೊಯ್ಯುವಾಗ ಉತ್ತಮ ರೀತಿಯಲ್ಲಿ ಕೊಯ್ಯಿರಿ. ನಿಮ್ಮಲ್ಲೊಬ್ಬನು ಕೊಯ್ಯುವಾಗ ಚೂರಿಯನ್ನು ಹರಿತಗೊಳಿಸಲಿ ಮತ್ತು ಪ್ರಾಣಿಗೆ ನಿರಾಳತೆಯನ್ನು ನೀಡಲಿ."

13- ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ*."

40- "ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?"* ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."