Jurisprudence of Supplications and Remembrance of Allah

Jurisprudence of Supplications and Remembrance of Allah

10- "ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು.* ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾವು ನಿಮ್ಮಲ್ಲಿ ಮತ್ತು ನೀವು ತಂದ ಧರ್ಮದಲ್ಲಿ ವಿಶ್ವಾಸವಿಟ್ಟಿದ್ದೇವೆ. ಆದರೂ ನಿಮಗೆ ನಮ್ಮ ಬಗ್ಗೆ ಭಯವೇ?" ಅವರು ಉತ್ತರಿಸಿದರು: "ಹೌದು, ನಿಶ್ಚಯವಾಗಿಯೂ ಹೃದಯಗಳು ಅಲ್ಲಾಹನ ಬೆರಳುಗಳ ಪೈಕಿ ಎರಡು ಬೆರಳುಗಳ ನಡುವೆ ಇವೆ. ಅವನು ಇಚ್ಛಿಸುವಂತೆ ಅವುಗಳನ್ನು ತಿರುಗಿಸುತ್ತಾನೆ."

13- "ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು.* ಅವನೇನಾದರೂ ಎದ್ದು ಅಲ್ಲಾಹನನ್ನು ಸ್ಮರಿಸಿದರೆ, ಒಂದು ಗಂಟು ಬಿಚ್ಚಿಹೋಗುತ್ತದೆ. ಅವನು ವುದೂ ನಿರ್ವಹಿಸಿದರೆ ಇನ್ನೊಂದು ಗಂಟು ಬಿಚ್ಚಿಹೋಗುತ್ತದೆ. ಅವನು ನಮಾಝ್ ಮಾಡಿದರೆ ಮೂರನೆಯ ಗಂಟು ಬಿಚ್ಚಿಹೋಗುತ್ತದೆ. ಆಗ ಅವನು ಉಲ್ಲಾಸದಿಂದ ಶುದ್ಧ ಮನಸ್ಸಿನೊಂದಿಗೆ ಬೆಳಗನ್ನು ಪ್ರವೇಶಿಸುತ್ತಾನೆ. ಇಲ್ಲದಿದ್ದರೆ ಅವನು ಕೆಟ್ಟ ಮನಸ್ಸಿನೊಂದಿಗೆ ಆಲಸ್ಯದಿಂದ ಬೆಳಗನ್ನು ಪ್ರವೇಶಿಸುತ್ತಾನೆ."

18- "ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ,* ವಅಸ್ಲಿಹ್ ಲೀ ದುನ್ಯಾಯಾಯ ಅಲ್ಲತೀ ಫೀಹಾ ಮಆಶೀ, ವಅಸ್ಲಿಹ್ ಲೀ ಆಖಿರತೀ ಅಲ್ಲತೀ ಫೀಹಾ ಮಆದೀ, ವಜ್‌ಅಲಿಲ್ ಹಯಾತ ಝಿಯಾದತನ್ ಲೀ ಫೀ ಕುಲ್ಲಿ ಖೈರಿನ್, ವಜ್‌ಅಲಿಲ್ ಮೌತ ರಾಹತನ್ ಲೀ ಮಿನ್ ಕುಲ್ಲಿ ಶರ‍್ರ್" (ಓ ಅಲ್ಲಾಹ್, ನನ್ನ ಕೆಲಸ-ಕಾರ್ಯಗಳ ಸಂರಕ್ಷಣೆಯಾಗಿರುವ ನನ್ನ ಧರ್ಮವನ್ನು ನನಗೆ ಉತ್ತಮಗೊಳಿಸು, ನಾನು ಜೀವಿಸಬೇಕಾದ ನನ್ನ ಇಹಲೋಕವನ್ನು ನನಗೆ ಉತ್ತಮಗೊಳಿಸು, ನನ್ನ ಮರಳಿ ಹೋಗಬೇಕಾದ ನನ್ನ ಪರಲೋಕವನ್ನು ನನಗೆ ಉತ್ತಮಗೊಳಿಸು. ಜೀವನವನ್ನು ಎಲ್ಲಾ ರೀತಿಯ ಒಳಿತುಗಳಲ್ಲಿ ನನಗೆ ಹೆಚ್ಚಿಸಿಕೊಡು ಮತ್ತು ಮರಣವನ್ನು ಎಲ್ಲ ರೀತಿಯ ಕೆಡುಕುಗಳಿಂದ ನೆಮ್ಮದಿಯಾಗಿ ಮಾಡು).

20- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬೆಳಗಾಗುವಾಗ ಮತ್ತು ಸಂಜೆಯಾಗುವಾಗ ಈ ಪ್ರಾರ್ಥನೆಗಳನ್ನು ಪಠಿಸದೆ ಬಿಟ್ಟುಬಿಡುತ್ತಿರಲಿಲ್ಲ: @"ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ.* ಓ ಅಲ್ಲಾಹ್! ನನ್ನ ಧರ್ಮದಲ್ಲಿ, ಇಹಲೋಕದಲ್ಲಿ, ಕುಟುಂಬದಲ್ಲಿ ಮತ್ತು ಸಂಪತ್ತಿನಲ್ಲಿ ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಕುಂದು-ಕೊರತೆಗಳನ್ನು ಮುಚ್ಚಿಡು ಮತ್ತು ನನ್ನ ಭಯವನ್ನು ನಿವಾರಿಸು. ಓ ಅಲ್ಲಾಹ್! ನನ್ನ ಮುಂಭಾಗದಿಂದ, ನನ್ನ ಹಿಂಭಾಗದಿಂದ, ನನ್ನ ಬಲಭಾಗದಿಂದ, ನನ್ನ ಎಡಭಾಗದಿಂದ, ನನ್ನ ಮೇಲ್ಭಾಗದಿಂದ ನನ್ನನ್ನು ರಕ್ಷಿಸು. ನನ್ನ ಕೆಳಭಾಗದಿಂದ ನನ್ನನ್ನು ಹತ್ಯೆಗೈಯಲಾಗುವುದರಿಂದ ನಾನು ನಿನ್ನ ಮಹಾತ್ಮೆಯ ಮೂಲಕ ನಿನ್ನಲ್ಲಿ ರಕ್ಷೆ ಬೇಡುತ್ತೇನೆ."

26- "ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ* ಯಾವುದೆಂದರೆ ನೀವು ಹೀಗೆ ಪಠಿಸುವುದು: ಓ ಅಲ್ಲಾಹ್! ನೀನೇ ನನ್ನ ಪರಿಪಾಲಕ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ನೀನು ನನ್ನನ್ನು ಸೃಷ್ಟಿಸಿರುವೆ ಮತ್ತು ನಾನು ನಿನ್ನ ದಾಸನಾಗಿರುವೆ. ನಾನು ನನಗೆ ಸಾಧ್ಯವಾದಷ್ಟು ನಿನ್ನ ಕರಾರು ಮತ್ತು ವಾಗ್ದಾನಕ್ಕೆ ನಿಷ್ಠನಾಗಿರುತ್ತೇನೆ. ನಾನು ಮಾಡಿದ ಪಾಪಗಳ ಕೆಡುಕುಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ. ನನ್ನ ಮೇಲಿರುವ ನಿನ್ನ ಅನುಗ್ರಹಗಳನ್ನು ಒಪ್ಪಿಕೊಳ್ಳುತ್ತೇನೆ ಮತ್ತು ನಾನು ಮಾಡಿದ ಪಾಪಗಳನ್ನೂ ಒಪ್ಪಿಕೊಳ್ಳುತ್ತೇನೆ. ಆದ್ದರಿಂದ ನನ್ನನ್ನು ಕ್ಷಮಿಸು. ಏಕೆಂದರೆ, ನಿಶ್ಚಯವಾಗಿಯೂ ನೀನಲ್ಲದೆ ಪಾಪಗಳನ್ನು ಕ್ಷಮಿಸುವವರಿಲ್ಲ." ಅವರು (ಪ್ರವಾದಿ) ಮುಂದುವರಿದು ಹೇಳಿದರು: "ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ಹಗಲಿನಲ್ಲಿ ಪಠಿಸಿ, ನಂತರ ಅದೇ ದಿನ ಸಂಜೆಯಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ. ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ರಾತ್ರಿಯಲ್ಲಿ ಪಠಿಸಿ, ನಂತರ ಬೆಳಗಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ."