The Creed

21- ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮತ್ತು ಕೆಡುಕುಗಳನ್ನು ದಾಖಲಿಸಿದನು. ನಂತರ ಅವುಗಳನ್ನು (ಹೀಗೆ) ವಿವರಿಸಿದನು: ಒಬ್ಬ ವ್ಯಕ್ತಿ ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ, ಅಲ್ಲಾಹು ಅದರ ಪ್ರತಿಫಲವನ್ನು ಹತ್ತರಿಂದ ಏಳು ನೂರರವರೆಗೆ ಇಮ್ಮಡಿಗೊಳಿಸಿ, ಅಥವಾ ಅದಕ್ಕಿಂತಲೂ ಹೆಚ್ಚು ಪ್ರತಿಫಲವನ್ನು ದಾಖಲಿಸುವನು. ಒಬ್ಬ ವ್ಯಕ್ತಿ ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಕೆಡುಕನ್ನು ಮಾತ್ರ ದಾಖಲಿಸುವನು

79- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

85- ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ