Condemning Whims and Desires

Condemning Whims and Desires

3- "ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ.* ಆ ನೇರ ಮಾರ್ಗದ ಎರಡು ಬದಿಗಳಲ್ಲೂ ಗೋಡೆಗಳಿವೆ. ಆ ಗೋಡೆಗಳಲ್ಲಿ ತೆರೆದುಕೊಂಡಿರುವ ಅನೇಕ ಬಾಗಿಲುಗಳಿವೆ. ಆ ಬಾಗಿಲುಗಳಲ್ಲಿ ಪರದೆಗಳನ್ನು ಹಾಕಲಾಗಿದೆ. ಆ ನೇರ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಕೂಗಿ ಹೇಳುತ್ತಿರುತ್ತಾನೆ: "ಓ ಜನರೇ! ನೀವೆಲ್ಲರೂ ನೇರ ಮಾರ್ಗವನ್ನು ಪ್ರವೇಶಿರಿ. ಅತ್ತಿತ್ತ ತಿರುಗದೆ ನೇರವಾಗಿ ನಡೆಯಿರಿ." ಆ ಮಾರ್ಗದ ಮೇಲ್ಭಾಗದಲ್ಲಿ ಒಬ್ಬ ವ್ಯಕ್ತಿಯಿದ್ದು, ಆ ಬಾಗಿಲುಗಳಲ್ಲಿ ಯಾವುದಾದರೂ ಬಾಗಿಲನ್ನು ತೆರೆಯಲು ಪ್ರಯತ್ನಿಸಿದರೆ, ಅವನು ಕೂಗಿ ಹೇಳುತ್ತಾನೆ: "ನಿನಗೆ ದುರದೃಷ್ಟ ಕಾದಿದೆ! ಆ ಬಾಗಿಲನ್ನು ತೆರೆಯಬೇಡ. ನೀನು ಅದನ್ನು ತೆರೆದರೆ ಅದರ ಒಳಗೆ ಪ್ರವೇಶಿಸಿ ಬಿಡುವೆ." ಆ ನೇರ ಮಾರ್ಗವು ಇಸ್ಲಾಂ ಧರ್ಮವಾಗಿದೆ. ಆ ಎರಡು ಗೋಡೆಗಳು ಅಲ್ಲಾಹನ ಎಲ್ಲೆಗಳಾಗಿವೆ. ತೆರೆದುಕೊಂಡಿರುವ ಬಾಗಿಲುಗಳು ಅಲ್ಲಾಹು ನಿಷೇಧಿತ ವಲಯಗಳಾಗಿವೆ. ಆ ನೇರ ಮಾರ್ಗದ ಪ್ರವೇಶದ್ವಾರದಲ್ಲಿ ಕೂಗಿ ಕರೆಯುವುದು ಅಲ್ಲಾಹನ ಗ್ರಂಥವಾಗಿದೆ. ಆ ಮಾರ್ಗದ ಮೇಲ್ಭಾಗದಿಂದ ಕೂಗಿ ಕರೆಯುವುದು ಪ್ರತಿಯೊಬ್ಬ ಮುಸಲ್ಮಾನನ ಹೃದಯದಲ್ಲಿರುವ ಅಲ್ಲಾಹನ ಉಪದೇಶಕವಾಗಿದೆ."

4- "ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಹೋಗುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ ಕಡೆಯಿಂದಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ." [ಆಲು ಇಮ್ರಾನ್:7] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ.*"