Purification of Souls

Purification of Souls

1- "ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ*. ಇವೆರಡರ ಮಧ್ಯೆ ಸಂಶಯಾಸ್ಪದ ವಿಷಯಗಳಿವೆ. ಜನರಲ್ಲಿ ಹೆಚ್ಚಿನವರಿಗೂ ಅವುಗಳ ಬಗ್ಗೆ ಜ್ಞಾನವಿಲ್ಲ. ಯಾರು ಈ ಸಂಶಯಾಸ್ಪದ ವಿಷಯಗಳಿಂದ ದೂರವಿರುತ್ತಾನೋ, ಅವನು ತನ್ನ ಧರ್ಮ ಮತ್ತು ಘನತೆಯನ್ನು ಕಾಪಾಡಿಕೊಂಡನು. ಯಾರು ಈ ಸಂಶಯಾಸ್ಪದ ವಿಷಯಗಳಲ್ಲಿ ಒಳಪಡುತ್ತಾನೋ ಅವನು ಹರಾಮ್‌ನಲ್ಲಿ ಒಳಪಡುತ್ತಾನೆ. ಅವನ ಸ್ಥಿತಿಯು (ಪ್ರವೇಶಾನುಮತಿಯಿಲ್ಲದ) ಹುಲ್ಲುಗಾವಲಿನ ಅಂಚಿನಲ್ಲಿ ತನ್ನ ಕುರಿಮಂದೆಯನ್ನು ಮೇಯಿಸುವ ಒಬ್ಬ ಕುರಿಗಾಹಿಯಂತೆ. ಅವನ ಕುರಿಗಳು ಹುಲ್ಲುಗಾವಲಿನೊಳಗೆ ನುಗ್ಗಿ ಮೇಯುವ ಸಾಧ್ಯತೆಯಿದೆ. ಎಚ್ಚರಾ! ಪ್ರತಿಯೊಬ್ಬ ರಾಜನಿಗೂ ಒಂದು (ನಿಷೇಧಿತ) ವಲಯವಿದೆ. ಎಚ್ಚರಾ! ಅಲ್ಲಾಹು ನಿಷೇಧಿಸಿದ ಕಾರ್ಯಗಳು ಅವನ (ನಿಷೇಧಿತ) ವಲಯವಾಗಿದೆ. ಎಚ್ಚರಾ! ದೇಹದಲ್ಲಿ ಒಂದು ಮಾಂಸದ ತುಂಡಿದೆ. ಅದು ಸರಿಯಾದರೆ ಸಂಪೂರ್ಣ ದೇಹವು ಸರಿಯಾಗುತ್ತದೆ. ಅದು ಕೆಟ್ಟರೆ ಸಂಪೂರ್ಣ ದೇಹವು ಕೆಡುತ್ತದೆ. ಎಚ್ಚರಾ! ಅದು ಹೃದಯವಾಗಿದೆ."

8- ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್ನ ಮಾತನ್ನು ಕೇಳುವುದಿಲ್ಲ. ನಾನು ಅವರಿಗೆ ಗದರಿಸುತ್ತೇನೆ ಮತ್ತು ಹೊಡೆಯುತ್ತೇನೆ. ಅವರಿಗೆ ಸಂಬಂಧಿಸಿದಂತೆ ನನ್ನ ಸ್ಥಿತಿಯೇನು?" ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "@ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ*. ನೀವು ನೀಡುವ ಶಿಕ್ಷೆಯು ಅವರು ಮಾಡಿದ ಪಾಪಗಳಷ್ಟೇ ಇದ್ದರೆ ಎರಡೂ ಸಮಾನವಾಗುತ್ತದೆ. ಅದರಲ್ಲಿ ನಿಮಗೆ ಪ್ರತಿಫಲ ಅಥವಾ ಶಿಕ್ಷೆಯಿಲ್ಲ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಕಡಿಮೆ ಇದ್ದರೆ ನಿಮಗೆ ಪ್ರತಿಫಲವಿದೆ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಹೆಚ್ಚಿದ್ದರೆ ಪ್ರತೀಕಾರವಾಗಿ ನಿಮ್ಮ ಕೆಲವು ಪುಣ್ಯಕಾರ್ಯಗಳನ್ನು ಅವರಿಗೆ ನೀಡಲಾಗುತ್ತದೆ." ಆ ವ್ಯಕ್ತಿ ಸ್ವಲ್ಪ ದೂರ ಹೋಗಿ ಗಟ್ಟಿಯಾಗಿ ಅಳತೊಡಗಿದರು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಅಲ್ಲಾಹನ ಗ್ರಂಥದಲ್ಲಿ ಈ ವಚನವನ್ನು ಪಠಿಸಿಲ್ಲವೇ? "ಪುನರುತ್ಥಾನ ದಿನದಂದು ನಾವು ನ್ಯಾಯಬದ್ಧವಾದ ತಕ್ಕಡಿಗಳನ್ನು ಸ್ಥಾಪಿಸುವೆವು. ಆಗ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ಓ ಅಲ್ಲಾಹನ ಸಂದೇಶವಾಹಕರೇ, ಅವರನ್ನು ಸ್ವತಂತ್ರಗೊಳಿಸುವುದಲ್ಲದೆ ನನಗಾಗಲಿ ಅವರಿಗಾಗಲಿ ಯಾವುದೇ ಒಳಿತನ್ನು ನಾನು ಕಾಣುತ್ತಿಲ್ಲ. ನಾನು ನಿಮ್ಮನ್ನು ಸಾಕ್ಷಿಯಾಗಿಸಿ ಅವರೆಲ್ಲರನ್ನೂ ಸ್ವತಂತ್ರಗೊಳಿಸುತ್ತಿದ್ದೇನೆ."