إعدادات العرض
1- ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು
2- “ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”
3- ತನ್ನ ಎರಡು ದವಡೆಗಳ ನಡುವೆ ಮತ್ತು ತನ್ನ ಎರಡು ಕಾಲುಗಳ ನಡುವೆ ಇರುವುದನ್ನು ನಿಯಂತ್ರಿಸುತ್ತೇನೆಂದು ಯಾರು ನನಗೆ ಖಾತ್ರಿ ನೀಡುತ್ತಾನೋ, ಅವನಿಗೆ ನಾನು ಸ್ವರ್ಗದ ಖಾತ್ರಿ ನೀಡುತ್ತೇನೆ
4- “ನಿಮ್ಮಲ್ಲೊಬ್ಬನಿಗೆ ಸ್ವರ್ಗವು ಅವನ ಚಪ್ಪಲಿಯ ತೊಗಲಪಟ್ಟಿಗಿಂತಲೂ ಹತ್ತಿರದಲ್ಲಿದೆ; ಹಾಗೆಯೇ ನರಕವೂ ಕೂಡ.”
5- “ನರಕವನ್ನು ಮೋಹಗಳಿಂದ ಮರೆಮಾಡಲಾಗಿದೆ ಮತ್ತು ಸ್ವರ್ಗವನ್ನು ಸಂಕಷ್ಟಗಳಿಂದ ಮರೆಮಾಡಲಾಗಿದೆ.”
6- ಜನರು ಅತಿಹೆಚ್ಚಾಗಿ ಸ್ವರ್ಗವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: "ಅಲ್ಲಾಹನ ಭಯ ಮತ್ತು ಉತ್ತಮ ನಡವಳಿಕೆ
7- ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು
8- ಪುನರುತ್ಥಾನ ದಿನದಂದು ಒಬ್ಬ ವ್ಯಕ್ತಿಯನ್ನು ತರಲಾಗುವುದು ಮತ್ತು ಅವನನ್ನು ನರಕಕ್ಕೆ ಎಸೆಯಲಾಗುವುದು. ಆಗ ಅವನ ಕರುಳುಗಳು ಹೊಟ್ಟೆಯಿಂದ ಹೊರ ಚೆಲ್ಲುವುವು. ಕತ್ತೆಯು ಗಾಣಕ್ಕೆ ಸುತ್ತು ಬರುವಂತೆ ಅವನು ಅದರೊಂದಿಗೆ ಸುತ್ತು ಬರುವನು
9- ಅದು ಎಪ್ಪತ್ತು ವರ್ಷಗಳ ಹಿಂದೆ ನರಕಕ್ಕೆ ಎಸೆಯಲಾದ ಒಂದು ಕಲ್ಲು. ಅದು ನರಕದೊಳಗೆ ಬೀಳುತ್ತಾ ಇದೀಗ ಅದರ ತಳಭಾಗವನ್ನು ತಲುಪಿದೆ
10- ಒಬ್ಬ ಘೋಷಕನು ಘೋಷಿಸುವನು: ನೀವು ಸದಾ ಆರೋಗ್ಯವಂತರಾಗಿರುವಿರಿ. ನೀವೆಂದೂ ರೋಗಿಗಳಾಗುವುದಿಲ್ಲ. ನೀವು ಸದಾ ಜೀವಂತವಾಗಿರುವಿರಿ. ನೀವೆಂದೂ ಮರಣಹೊಂದುವುದಿಲ್ಲ. ನೀವು ಸದಾ ಯುವಕರಾಗಿರುವಿರಿ. ನೀವೆಂದೂ ವೃದ್ಧರಾಗುವುದಿಲ್ಲ. ನೀವು ಸದಾ ಸುಖಭೋಗಿಗಳಾಗುವಿರಿ. ನೀವೆಂದೂ ನೋವು ಅನುಭವಿಸುವುದಿಲ್ಲ
11- ಸ್ವರ್ಗವಾಸಿಗಳು ಸ್ವರ್ಗವನ್ನು ಪ್ರವೇಶಿಸಿದಾಗ ಸರ್ವಶಕ್ತನಾದ ಅಲ್ಲಾಹು ಕೇಳುವನು: "ನಾನು ನಿಮಗೆ ಇನ್ನೂ ಏನಾದರೂ ಹೆಚ್ಚಿಗೆ ಕೊಡಬೇಕೆಂದು ನೀವು ಬಯಸುತ್ತೀರಾ?
12- ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರಿಸಿದ್ದರೂ ನಗ್ನರಾಗಿರುವ ಮತ್ತು (ಜನರನ್ನು ಕೆಡುಕಿನ ಕಡೆಗೆ) ವಾಲಿಸುವ ಹಾಗೂ ಸ್ವಯಂ ಅದರೆಡೆಗೆ ವಾಲುವ ಸ್ತ್ರೀಯರು
13- (ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು
14- ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ