Shariah-approved Politics

Shariah-approved Politics

1- "ಕಷ್ಟದಲ್ಲೂ, ಸುಖದಲ್ಲೂ, ಇಷ್ಟವಿದ್ದರೂ, ಇಷ್ಟವಿಲ್ಲದಿದ್ದರೂ, ನಮಗಿಂತ ಇತರರಿಗೆ ಆದ್ಯತೆ ನೀಡಿದರೂ ನಾವು ನಿಮ್ಮ ಮಾತನ್ನು ಕೇಳುತ್ತೇವೆ ಮತ್ತು ಅನುಸರಿಸುತ್ತೇವೆ* ಎಂದು ನಾವು ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷ್ಠೆಯ ಪ್ರಮಾಣ ಮಾಡಿದೆವು. ಅದೇ ರೀತಿ, ಅಧಿಕಾರದಲ್ಲಿರುವವರ ವಿಷಯದಲ್ಲಿ ನಾವು ವಿರೋಧ ವ್ಯಕ್ತಪಡಿಸುವುದಿಲ್ಲ, ನಾವು ಎಲ್ಲೇ ಇದ್ದರೂ ಸತ್ಯವನ್ನೇ ಹೇಳುತ್ತೇವೆ, ಮತ್ತು ಅಲ್ಲಾಹನ ವಿಷಯದಲ್ಲಿ ನಾವು ಯಾವುದೇ ವಿಮರ್ಶಕನ ಮಾತುಗಳಿಗೆ ಹೆದರುವುದಿಲ್ಲ ಎಂದು ನಾವು ನಿಷ್ಠೆಯ ಪ್ರಮಾಣ ಮಾಡಿದೆವು."

6- "ಯಾರು ಆಜ್ಞಾಪಾಲನೆಯಿಂದ ಹಿಂದೆ ಸರಿದು, ಸಮಾಜದಿಂದ ಬೇರ್ಪಟ್ಟು, ಅದೇ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾನೋ, ಅವನು ಅಜ್ಞಾನಕಾಲದ ಸಾವನ್ನಪ್ಪಿದ್ದಾನೆ.* ಯಾರು ಅಂಧ ಪತಾಕೆಯ ಅಡಿಯಲ್ಲಿ ಯುದ್ಧ ಮಾಡುತ್ತಾ, ಜನಾಂಗೀಯತೆಗಾಗಿ ಕೋಪಗೊಳ್ಳುತ್ತಲೂ, ಜನಾಂಗೀಯತೆಯ ಕಡೆಗೆ ಕರೆಯುತ್ತಲೂ, ಜನಾಂಗೀಯತೆಯನ್ನು ಬೆಂಬಲಿಸುತ್ತಲೂ ಇರುತ್ತಾ ಅದೇ ಸ್ಥಿತಿಯಲ್ಲಿ ಸಾಯುತ್ತಾನೋ, ಅವನು ಅಜ್ಞಾನಕಾಲದ ಸಾವನ್ನಪ್ಪಿದ್ದಾನೆ. ಯಾರು ನನ್ನ ಸಮುದಾಯದ ವಿರುದ್ಧ ಬಂಡೆದ್ದು, ಅವರಲ್ಲಿರುವ ನೀತಿವಂತರಿಗೂ ದುಷ್ಟರಿಗೂ ಬಡಿಯುತ್ತಾನೋ, ಅವರಲ್ಲಿರುವ ಸತ್ಯವಿಶ್ವಾಸಿಗಳನ್ನು ಕೂಡ ಬಿಟ್ಟುಬಿಡುವುದಿಲ್ಲವೋ, ಮತ್ತು ಕರಾರು ಮಾಡಿಕೊಂಡವರ ಕರಾರನ್ನು ಸಹ ನೆರವೇರಿಸುವುದಿಲ್ಲವೋ, ಅವನು ನನಗೆ ಸೇರಿದವನಲ್ಲ ಮತ್ತು ನಾನು ಅವನಿಗೆ ಸೇರಿದವನಲ್ಲ."

11- “ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು.* ಆಡಳಿತಗಾರನು ಜನರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿದ್ದಾನೆ. ಪುರುಷನು ತನ್ನ ಮನೆಯವರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿದ್ದಾನೆ. ಮಹಿಳೆ ತನ್ನ ಗಂಡನ ಮನೆಗೆ ಮತ್ತು ಅವನ ಮಕ್ಕಳಿಗೆ ಕುರಿಗಾಹಿಯಾಗಿದ್ದಾಳೆ ಮತ್ತು ಅವರಿಗೆ ಅವಳೇ ಜವಾಬ್ದಾರಳಾಗಿದ್ದಾಳೆ. ಗುಲಾಮನು ತನ್ನ ಯಜಮಾನನ ಆಸ್ತಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅದಕ್ಕೆ ಅವನೇ ಜವಾಬ್ದಾರನಾಗಿದ್ದಾನೆ. ತಿಳಿಯಿರಿ! ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು."