Human Rights in Islam

Human Rights in Islam

1- "ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "@ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ*. ಜನರಲ್ಲಿ ಎರಡು ವಿಧಗಳಿವೆ: ಅಲ್ಲಾಹನ ಗೌರವಕ್ಕೆ ಪಾತ್ರರಾದ ಧರ್ಮನಿಷ್ಠ, ನೀತಿವಂತ ಜನರು ಮತ್ತು ಅಲ್ಲಾಹು ತುಚ್ಛವಾಗಿ ಪರಿಗಣಿಸುವ ಕೆಟ್ಟ, ನತದೃಷ್ಟ ಜನರು. ಮನುಷ್ಯರೆಲ್ಲರೂ ಆದಮರ ಮಕ್ಕಳು. ಅಲ್ಲಾಹು ಆದಮರನ್ನು ಮಣ್ಣಿನಿಂದ ಸೃಷ್ಟಿಸಿದನು. ಅಲ್ಲಾಹು ಹೇಳುತ್ತಾನೆ: "ಜನರೇ! ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಂದು ಗಂಡು ಮತ್ತು ಒಂದು ಹೆಣ್ಣಿನಿಂದ ಸೃಷ್ಟಿಸಿದ್ದೇವೆ. ನೀವು ಪರಸ್ಪರ ಗುರುತಿಸುವುದಕ್ಕಾಗಿ ನಾವು ನಿಮ್ಮನ್ನು ವಿಭಿನ್ನ ಜನಾಂಗ ಮತ್ತು ಗೋತ್ರಗಳನ್ನಾಗಿ ಮಾಡಿದೆವು. ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯಧಿಕ ದೇವಭಯವುಳ್ಳವನು ಯಾರೋ ಅವನೇ ಅಲ್ಲಾಹನ ದೃಷ್ಟಿಯಲ್ಲಿ ಅತ್ಯಂತ ಗೌರವಾನ್ವಿತನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸೂಕ್ಷ್ಮ ಜ್ಞಾನಿಯಾಗಿದ್ದಾನೆ." [ಹುಜುರಾತ್ 13]."