Removing Impurities

Removing Impurities

3- ನಾನು ಅತ್ಯಧಿಕ ಮದಿ (ಸ್ಖಲನಪೂರ್ವ ದ್ರವ) ಸ್ರವಿಸುವ ವ್ಯಕ್ತಿಯಾಗಿದ್ದೆ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಗಳಿಗಿರುವ ಸ್ಥಾನಮಾನದಿಂದ ನಾನು ಅವರಲ್ಲಿ ಅದರ ಬಗ್ಗೆ ಕೇಳಲು ಸಂಕೋಚಪಡುತ್ತಿದ್ದೆ. ಆದ್ದರಿಂದ, ನಾನು ಮಿಕ್ದಾದ್ ಬಿನ್ ಅಸ್ವದ್ ರಿಗೆ ಆಜ್ಞಾಪಿಸಿದೆ. ಅವರು (ಅದರ ಬಗ್ಗೆ) ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವರು ತಮ್ಮ ಜನನಾಂಗವನ್ನು ತೊಳೆದು ವುದೂ (ಅಂಗಸ್ನಾನ) ನಿರ್ವಹಿಸಲಿ

6- ಅವರು ತಮ್ಮ ಚಿಕ್ಕ ಮಗುವನ್ನು (ಗಂಡು ಮಗುವನ್ನು) ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಕರೆತಂದರು. ಆ ಮಗು ಇನ್ನೂ (ಘನ) ಆಹಾರವನ್ನು ತಿನ್ನುತ್ತಿರಲಿಲ್ಲ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವನನ್ನು (ಮಗುವನ್ನು) ತಮ್ಮ ಮಡಿಲಲ್ಲಿ ಕುಳ್ಳಿರಿಸಿಕೊಂಡರು. ಆಗ ಅವನು ಅವರ ವಸ್ತ್ರದ ಮೇಲೆ ಮೂತ್ರ ವಿಸರ್ಜಿಸಿದನು. ಅವರು ನೀರನ್ನು ತರಿಸಿ, ಅದನ್ನು (ಮೂತ್ರದ ಮೇಲೆ) ಚಿಮುಕಿಸಿದರು. ಅವರು ಅದನ್ನು ತೊಳೆಯಲಿಲ್ಲ