Virtue of Prayer

Virtue of Prayer

3- "ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ*. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ್ನಿಸುವಂತೆ ಮಾಡಬೇಡಿ. ಏಕೆಂದರೆ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ಯಾರನ್ನಾದರೂ ಪ್ರಶ್ನೆ ಮಾಡಿದರೆ ಅವನನ್ನು ಹಿಡಿದು ತಲೆಕೆಳಗಾಗಿ ನರಕಕ್ಕೆ ಎಸೆಯುತ್ತಾನೆ."

4- ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "@ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ*, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."

7- ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತೇನೆ, ನಮಾಝ್ ಸಂಸ್ಥಾಪಿಸುತ್ತೇನೆ, ಝಕಾತ್ ನೀಡುತ್ತೇನೆ, ಕೇಳುತ್ತೇನೆ ಮತ್ತು ಅನುಸರಿಸುತ್ತೇನೆ ಹಾಗೂ ಎಲ್ಲಾ ಮುಸ್ಲಿಮರ ಹಿತಚಿಂತಕನಾಗಿರುತ್ತೇನೆ ಎಂದು ನಾನು ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷ್ಠೆಯ ಪ್ರತಿಜ್ಞೆ ಮಾಡಿದೆ.

10- "ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?"* ಅವರು ಉತ್ತರಿಸಿದರು: "ಅವನ ದೇಹದಲ್ಲಿ ಯಾವುದೇ ಕೊಳೆ ಉಳಿಯಲಾರದು." ಅವರು (ಪ್ರವಾದಿ) ಹೇಳಿದರು: "ಅದು ಐದು ವೇಳೆಯ ನಮಾಝಿನ ಉದಾಹರಣೆಯಾಗಿದೆ. ಅದರ ಮೂಲಕ ಅಲ್ಲಾಹು ಪಾಪಗಳನ್ನು ಅಳಿಸುತ್ತಾನೆ."