ಅಂತ್ಯದಿನದಲ್ಲಿ ವಿಶ್ವಾಸವಿಡುವುದು

ಅಂತ್ಯದಿನದಲ್ಲಿ ವಿಶ್ವಾಸವಿಡುವುದು

2- "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾಹಕರಾಗಿದ್ದಾರೆ, ಯೇಸು (ಅವರ ಮೇಲೆ ಶಾಂತಿಯಿರಲಿ) ಅಲ್ಲಾಹನ ದಾಸರು, ಸಂದೇಶವಾಹಕರು ಮತ್ತು ಅಲ್ಲಾಹು ಮರ್ಯಮರಿಗೆ ಹಾಕಿಕೊಟ್ಟ ಅವನ ವಚನ ಮತ್ತು ಅವನ ವತಿಯ ಆತ್ಮವಾಗಿದ್ದಾರೆ, ಸ್ವರ್ಗ ಸತ್ಯವಾಗಿದೆ, ನರಕ ಸತ್ಯವಾಗಿದೆ ಎಂದು ಯಾರಾದರೂ ಸಾಕ್ಷ್ಯ ವಹಿಸಿದರೆ, @ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು."

6- "ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕರೆಯುವನು*. ನಂತರ ಅವನ ಮುಂದೆ ತೊಂಬತ್ತೊಂಬತ್ತು ಸುರುಳಿಗಳನ್ನು ಇಡುವನು. ಪ್ರತಿಯೊಂದು ಸುರುಳಿಯೂ ದೃಷ್ಟಿ ತಲುಪುವಷ್ಟು ದೂರದವರೆಗೆ ಹರಡಿಕೊಂಡಿರುವುದು. ನಂತರ ಅವನು (ಅಲ್ಲಾಹು) ಕೇಳುವನು: "ಇವುಗಳಲ್ಲಿ ಯಾವುದನ್ನಾದರೂ ನೀನು ನಿರಾಕರಿಸುವೆಯಾ? ಕರ್ಮಗಳನ್ನು ದಾಖಲಿಸುವ ನನ್ನ ದೂತರು ನಿನಗೇನಾದರೂ ಅನ್ಯಾಯ ಮಾಡಿದ್ದಾರೆಯೇ?" ಆಗ ಅವನು ಹೇಳುವನು: "ಓ ನನ್ನ ಪರಿಪಾಲಕನೇ! ಖಂಡಿತ ಇಲ್ಲ." ಆಗ ಅಲ್ಲಾಹು ಕೇಳುವನು: "ನಿನಗೆ ಹೇಳಲು ಏನಾದರೂ ನೆಪವಿದೆಯೇ?" ಆಗ ಅವನು ಹೇಳುವನು: "ಓ ನನ್ನ ಪರಿಪಾಲಕನೇ! ಖಂಡಿತ ಇಲ್ಲ." ಆಗ ಅಲ್ಲಾಹು ಕೇಳುವನು: "ನಿಶ್ಚಯವಾಗಿಯೂ ನಮ್ಮ ಬಳಿ ನಿನಗೆ ಒಂದು ಒಳಿತಿದೆ. (ಹೆದರಬೇಡ), ಇಂದು ನಿನಗೆ ಯಾವುದೇ ಅನ್ಯಾಯವಾಗುವುದಿಲ್ಲ." ನಂತರ ಅವನು, "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ನಾನು ಸಾಕ್ಷಿ ವಹಿಸುತ್ತೇನೆ, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷಿ ವಹಿಸುತ್ತೇನೆ" ಎಂದು ಬರೆಯಲಾದ ಒಂದು ಚೀಟಿಯನ್ನು ಹೊರತೆಗೆಯುವನು. ನಂತರ ಅವನು ಹೇಳುವನು: "ನಿನ್ನ ತಕ್ಕಡಿಯನ್ನು ಇಲ್ಲಿಗೆ ತಾ." ಆ ವ್ಯಕ್ತಿ ಕೇಳುವನು: "ಓ ನನ್ನ ಪರಿಪಾಲಕನೇ! ಈ ಸುರುಳಿಗಳಿಗೆ ಹೋಲಿಸಿದರೆ ಈ ಚೀಟಿ ಎಷ್ಟು ತೂಗಬಹುದು?" ಆಗ ಅಲ್ಲಾಹು ಹೇಳುವನು: "(ಹೆದರಬೇಡ), ನಿನಗೆ ಯಾವುದೇ ಅನ್ಯಾಯವಾಗುವುದಿಲ್ಲ." ಆ ಸುರಳಿಗಳನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಮತ್ತು ಈ ಚೀಟಿಯನ್ನು ಇನ್ನೊಂದು ತಟ್ಟೆಯಲ್ಲಿ ಇಡಲಾಗುವುದು. ಆಗ ಸುರುಳಿಗಳು ಹಗುರವಾಗಿ ಚೀಟಿ ಭಾರವಾಗುವುದು. ಅಲ್ಲಾಹನ ಹೆಸರಿಗಿಂತಲೂ ಹೆಚ್ಚು ಭಾರವಾದದ್ದು ಯಾವುದೂ ಇಲ್ಲ."

7- "ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು*: "ಸ್ವರ್ಗವನ್ನು ಮತ್ತು ನಾನು ಅಲ್ಲಿ ಸ್ವರ್ಗವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಜಿಬ್ರೀಲರು ನೋಡಿ ಮರಳಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದರ ಬಗ್ಗೆ ಕೇಳಿದ ಯಾವುದೇ ವ್ಯಕ್ತಿಯೂ ಅದನ್ನು ಪ್ರವೇಶಿಸದೇ ಇರಲಾರ." ನಂತರ ಅಲ್ಲಾಹನ ಆಜ್ಞೆಯ ಮೇರೆಗೆ ಅದನ್ನು ಕಷ್ಟಗಳಿಂದ ಹೊದಿಯಲಾಯಿತು. ನಂತರ ಅಲ್ಲಾಹು ಹೇಳಿದನು: "ಸ್ವರ್ಗಕ್ಕೆ ಹೋಗಿ ನಾನು ಅಲ್ಲಿ ಸ್ವರ್ಗವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಅವರು ಅದನ್ನು ನೋಡಿದಾಗ, ಅದನ್ನು ಕಷ್ಟಗಳಿಂದ ಹೊದಿಯಲಾಗಿತ್ತು. ಅವರು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದನ್ನು ಪ್ರವೇಶಿಸಲು ಯಾರಿಗೂ ಸಾಧ್ಯವಾಗಲಾರದೆಂದು ನಾನು ಭಯಪಡುತ್ತೇನೆ." ಅಲ್ಲಾಹು ಹೇಳಿದನು: "ನರಕಕ್ಕೆ ಹೋಗಿ ಅಲ್ಲಿ ನಾನು ನರಕವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಅವರು ಅದನ್ನು ನೋಡಿದಾಗ, ಅದರ ಭಾಗಗಳು ಒಂದು ಇನ್ನೊಂದರ ಮೇಲೆ ಏರಿ ಹೋಗುವುದನ್ನು ಕಂಡರು. ಅವರು ಮರಳಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಯಾರೂ ಅದನ್ನು ಪ್ರವೇಶಿಸಲಾರರು." ನಂತರ ಅಲ್ಲಾಹನ ಆಜ್ಞೆಯ ಮೇರೆಗೆ ಅದನ್ನು ಮೋಹಗಳಿಂದ ಹೊದಿಯಲಾಯಿತು. ನಂತರ ಅಲ್ಲಾಹು ಹೇಳಿದನು: "ಹೋಗು, ಅದನ್ನು ಪುನಃ ನೋಡಿ ಬಾ." ಅವರು ಅದನ್ನು ನೋಡಿದಾಗ, ಅದನ್ನು ಮೋಹಗಳಿಂದ ಹೊದಿಯಲಾಗಿತ್ತು. ಅವರು ಹಿಂದಿರುಗಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದನ್ನು ಪ್ರವೇಶಿಸದೇ ಬಚಾವಾಗಲು ಯಾರಿಗೂ ಸಾಧ್ಯವಾಗಲಾರದೆಂದು ನನಗೆ ಭಯವಾಗುತ್ತಿದೆ."

15- "ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ."

16- "ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?"* ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."

17- "ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು.* ನಂತರ ಅವನ ಪಾರ್ಶ್ವ, ಹಣೆ ಮತ್ತು ಬೆನ್ನುಗಳಿಗೆ ಅದರಿಂದ ಬರೆ ಹಾಕಲಾಗುವುದು. ಅವು ತಣ್ಣಗಾದಾಗಲೆಲ್ಲಾ ಅದನ್ನು ಪುನಃ ಕಾಯಿಸಲಾಗುವುದು. ಐವತ್ತು ಸಾವಿರ ವರ್ಷಗಳಷ್ಟು ದೀರ್ಘವಾದ ದಿನದಂದು ಅಲ್ಲಾಹು ಅವನ ದಾಸರ ಮಧ್ಯೆ ತೀರ್ಪು ನೀಡಿ ಮುಗಿಸುವ ತನಕ ಇದು ಮುಂದುವರಿಯುವುದು. ನಂತರ ಅವನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಅವನ ದಾರಿಯನ್ನು ಕಂಡುಕೊಳ್ಳುವನು."

29- ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಕೊಳದ ಪಾತ್ರೆಗಳು ಯಾವುವು?" ಅವರು ಉತ್ತರಿಸಿದರು: "@ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಅದರ ಪಾತ್ರೆಗಳು ಆಕಾಶದಲ್ಲಿ ಕಡುಗತ್ತಲೆಯ ಮೋಡ ರಹಿತ ರಾತ್ರಿಯಲ್ಲಿ ಬೆಳಗುವ ನಕ್ಷತ್ರ ಮತ್ತು ತಾರೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿವೆ*. ಅವು ಸ್ವರ್ಗದ ಪಾತ್ರೆಗಳಾಗಿದ್ದು ಅದರಿಂದ ಕುಡಿಯುವವರಿಗೆ ಮತ್ತೆ ಎಂದಿಗೂ ದಾಹವಾಗುವುದಿಲ್ಲ. ಸ್ವರ್ಗದಿಂದ ಎರಡು ತೊರೆಗಳ ಮೂಲಕ ಅದಕ್ಕೆ ನೀರು ಹರಿದು ಬರುತ್ತದೆ. ಅದರ ನೀರು ಕುಡಿದವರಿಗೆ ಮತ್ತೆ ಎಂದಿಗೂ ದಾಹವಾಗುವುದಿಲ್ಲ. ಅದರ ಉದ್ದವು ಅದರ ಅಗಲದಷ್ಟೇ ಇದೆ. ಅಮ್ಮಾನ್‌ನಿಂದ ಐಲದವರೆಗೆ. ಅದರ ನೀರು ಹಾಲಿಗಿಂತಲೂ ಕಡು ಬೆಳ್ಳಗಿನ ಬಣ್ಣವನ್ನು ಹೊಂದಿದೆ ಮತ್ತು ಜೇನಿಗಿಂತಲೂ ಸಿಹಿಯಾಗಿದೆ."

30- "(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು.* ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರೆಯುವರು. ಆಗ ಸ್ವರ್ಗವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ಸ್ವರ್ಗವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅವರು, "ಓ ನರಕವಾಸಿಗಳೇ" ಎಂದು ಕೂಗಿ ಕರೆಯುವರು. ಆಗ ನರಕವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ನರಕವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅದನ್ನು ಕೊಯ್ಯಲಾಗುವುದು. ನಂತರ ಅವರು ಹೇಳುವರು: "ಓ ಸ್ವರ್ಗವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ. ಓ ನರಕವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ." ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: “ಮತ್ತು ಎಲ್ಲಾ ಕಾರ್ಯಗಳಿಗೂ ತೀರ್ಪು ನೀಡಲಾಗುವ ಆ ವ್ಯಥೆಯ ದಿನದ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ.” [ಮರ್ಯಮ್ 39] ಇಹಲೋಕದ ಈ ಜನರು ನಿರ್ಲಕ್ಷ್ಯದಲ್ಲಿದ್ದಾರೆ. "ಮತ್ತು ಅವರ ವಿಶ್ವಾಸವಿಡುವುದಿಲ್ಲ." [ಮರ್ಯಮ್ 39]

34- ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್ನ ಮಾತನ್ನು ಕೇಳುವುದಿಲ್ಲ. ನಾನು ಅವರಿಗೆ ಗದರಿಸುತ್ತೇನೆ ಮತ್ತು ಹೊಡೆಯುತ್ತೇನೆ. ಅವರಿಗೆ ಸಂಬಂಧಿಸಿದಂತೆ ನನ್ನ ಸ್ಥಿತಿಯೇನು?" ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "@ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ*. ನೀವು ನೀಡುವ ಶಿಕ್ಷೆಯು ಅವರು ಮಾಡಿದ ಪಾಪಗಳಷ್ಟೇ ಇದ್ದರೆ ಎರಡೂ ಸಮಾನವಾಗುತ್ತದೆ. ಅದರಲ್ಲಿ ನಿಮಗೆ ಪ್ರತಿಫಲ ಅಥವಾ ಶಿಕ್ಷೆಯಿಲ್ಲ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಕಡಿಮೆ ಇದ್ದರೆ ನಿಮಗೆ ಪ್ರತಿಫಲವಿದೆ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಹೆಚ್ಚಿದ್ದರೆ ಪ್ರತೀಕಾರವಾಗಿ ನಿಮ್ಮ ಕೆಲವು ಪುಣ್ಯಕಾರ್ಯಗಳನ್ನು ಅವರಿಗೆ ನೀಡಲಾಗುತ್ತದೆ." ಆ ವ್ಯಕ್ತಿ ಸ್ವಲ್ಪ ದೂರ ಹೋಗಿ ಗಟ್ಟಿಯಾಗಿ ಅಳತೊಡಗಿದರು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಅಲ್ಲಾಹನ ಗ್ರಂಥದಲ್ಲಿ ಈ ವಚನವನ್ನು ಪಠಿಸಿಲ್ಲವೇ? "ಪುನರುತ್ಥಾನ ದಿನದಂದು ನಾವು ನ್ಯಾಯಬದ್ಧವಾದ ತಕ್ಕಡಿಗಳನ್ನು ಸ್ಥಾಪಿಸುವೆವು. ಆಗ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ಓ ಅಲ್ಲಾಹನ ಸಂದೇಶವಾಹಕರೇ, ಅವರನ್ನು ಸ್ವತಂತ್ರಗೊಳಿಸುವುದಲ್ಲದೆ ನನಗಾಗಲಿ ಅವರಿಗಾಗಲಿ ಯಾವುದೇ ಒಳಿತನ್ನು ನಾನು ಕಾಣುತ್ತಿಲ್ಲ. ನಾನು ನಿಮ್ಮನ್ನು ಸಾಕ್ಷಿಯಾಗಿಸಿ ಅವರೆಲ್ಲರನ್ನೂ ಸ್ವತಂತ್ರಗೊಳಿಸುತ್ತಿದ್ದೇನೆ."

35- ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮಗೆ ತಿಳಿಸಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಅವರು ಉತ್ತರಿಸಿದರು: "@ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?*" ಕತಾದ ಹೇಳುತ್ತಾರೆ: "ಖಂಡಿತ ಸಾಮರ್ಥ್ಯವಿದೆ. ನಮ್ಮ ಪರಿಪಾಲಕನ (ಅಲ್ಲಾಹನ) ಪ್ರತಿಷ್ಠೆಯ ಮೇಲಾಣೆ!"

36- "@ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು.*" [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾವ ಅನುಗ್ರಹದ ಬಗ್ಗೆ ನಮ್ಮೊಡನೆ ಪ್ರಶ್ನಿಸಲಾಗುತ್ತದೆ? ನಮ್ಮಲ್ಲಿರುವುದು ಎರಡು ಕಪ್ಪು ವಸ್ತುಗಳು—،ಖರ್ಜೂರ ಮತ್ತು ನೀರು ಮಾತ್ರವಲ್ಲವೇ? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅದು ಖಂಡಿತವಾಗಿಯೂ ಸಂಭವಿಸುತ್ತದೆ."