Prophet's Guidance

Prophet's Guidance

2- "ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ*: ಝುಹರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು ಮತ್ತು ಅದರ ನಂತರ ಎರಡು ರಕಅತ್‌ಗಳು, ಮಗ್ರಿಬ್ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಇಶಾ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಫಜ್ರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು. (ಇವು ಮಾತ್ರವಲ್ಲದೆ) ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಯಾರೂ ಹೋಗದಂತಹ ಒಂದು ಸಮಯವಿದೆ. (ಪ್ರವಾದಿ ಪತ್ನಿ) ಹಫ್ಸ ನನಗೆ ತಿಳಿಸಿದರು: ಮುಅಝ್ಝಿನ್ ಅಝಾನ್ ನೀಡಿ ಪ್ರಭಾತವು ಉದಯವಾದಾಗ ಪ್ರವಾದಿಯವರು ಎರಡು ರಕಅತ್‌ ನಮಾಝ್ ಮಾಡುತ್ತಿದ್ದರು." ಇನ್ನೊಂದು ವರದಿಯಲ್ಲಿ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜುಮಾ ನಮಾಝಿನ ಬಳಿಕ ಎರಡು ರಕಅತ್‌ ನಮಾಝ್ ನಿರ್ವಹಿಸುತ್ತಿದ್ದರು."