The Hereafter Life

The Hereafter Life

5- "ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ."

6- "ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?"* ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."

7- "ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು.* ನಂತರ ಅವನ ಪಾರ್ಶ್ವ, ಹಣೆ ಮತ್ತು ಬೆನ್ನುಗಳಿಗೆ ಅದರಿಂದ ಬರೆ ಹಾಕಲಾಗುವುದು. ಅವು ತಣ್ಣಗಾದಾಗಲೆಲ್ಲಾ ಅದನ್ನು ಪುನಃ ಕಾಯಿಸಲಾಗುವುದು. ಐವತ್ತು ಸಾವಿರ ವರ್ಷಗಳಷ್ಟು ದೀರ್ಘವಾದ ದಿನದಂದು ಅಲ್ಲಾಹು ಅವನ ದಾಸರ ಮಧ್ಯೆ ತೀರ್ಪು ನೀಡಿ ಮುಗಿಸುವ ತನಕ ಇದು ಮುಂದುವರಿಯುವುದು. ನಂತರ ಅವನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಅವನ ದಾರಿಯನ್ನು ಕಂಡುಕೊಳ್ಳುವನು."

10- "@ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು.*" [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾವ ಅನುಗ್ರಹದ ಬಗ್ಗೆ ನಮ್ಮೊಡನೆ ಪ್ರಶ್ನಿಸಲಾಗುತ್ತದೆ? ನಮ್ಮಲ್ಲಿರುವುದು ಎರಡು ಕಪ್ಪು ವಸ್ತುಗಳು—،ಖರ್ಜೂರ ಮತ್ತು ನೀರು ಮಾತ್ರವಲ್ಲವೇ? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅದು ಖಂಡಿತವಾಗಿಯೂ ಸಂಭವಿಸುತ್ತದೆ."