ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು…

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು ಕಂಡುಬಂತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು ಕಂಡುಬಂತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು.

[صحيح] [متفق عليه]

الشرح

ಒಂದು ಯುದ್ಧದಲ್ಲಿ ಮಹಿಳೆಯೊಬ್ಬರು ಕೊಲೆಯಾಗಿ ಬಿದ್ದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಂಡರು. ಆಗ ಅವರು ಮಹಿಳೆಯರನ್ನು ಮತ್ತು ಪ್ರೌಢಾವಸ್ಥೆ ತಲುಪದ ಸಣ್ಣ ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು.

فوائد الحديث

ಯುದ್ಧದಲ್ಲಿ ಭಾಗವಹಿಸದ ಮಹಿಳೆಯರು, ಬಾಲಕರು ಮತ್ತು ಅವರದೇ ನಿಯಮವನ್ನು ಹೊಂದಿರುವ ವಯೋವೃದ್ಧರು, ಸನ್ಯಾಸಿಗಳು ಮುಂತಾದವರನ್ನು ಕೊಲ್ಲಬಾರದು. ಇವರು ಮುಸಲ್ಮಾನರ ವಿರುದ್ಧ ಯುದ್ಧ ಮಾಡಲು ಮಾರ್ಗದರ್ಶನ ಅಥವಾ ಸಹಾಯ ಮಾಡದಿರುವ ತನಕ. ಅವರು ಹಾಗೆ ಮಾಡಿದರೆ ಅವರನ್ನು ಕೊಲ್ಲಬಹುದು.

ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದನ್ನು ನಿಷೇಧಿಸಲಾಗಿದೆ. ಏಕೆಂದರೆ ಇವರು ಮುಸಲ್ಮಾನರೊಂದಿಗೆ ಯುದ್ಧ ಮಾಡುವುದಿಲ್ಲ. ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡುವುದರ ಉದ್ದೇಶವು ಸತ್ಯದ ಕರೆಯು ಎಲ್ಲಾ ಮನುಷ್ಯರಿಗೂ ತಲುಪುವುದಕ್ಕಾಗಿ ವೈರಿಗಳ ಶಕ್ತಿಯನ್ನು ಮುರಿಯುವುದು ಮಾತ್ರವಾಗಿದೆ.

ಯುದ್ಧಗಳು ಮತ್ತು ಕದನಗಳಲ್ಲಿಯೂ ಸಹ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕರುಣೆ ತೋರಿದ್ದನ್ನು ತಿಳಿಸಲಾಗಿದೆ.

التصنيفات

Manners of Jihad