ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ…

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ."

[صحيح] [متفق عليه]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಮದೀನಾ ನಿವಾಸಿಗಳಾದ ಅನ್ಸಾರ್‌ಗಳನ್ನು ಪ್ರೀತಿಸುವುದು ಸತ್ಯವಿಶ್ವಾಸದ ಸಂಪೂರ್ಣತೆಯ ಚಿಹ್ನೆಯಾಗಿದೆ. ಅವರು ಇಸ್ಲಾಂ ಧರ್ಮಕ್ಕೆ ಮತ್ತು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆರಂಭಿಕ ಬೆಂಬಲ ನೀಡಿದ್ದು, ಮುಸ್ಲಿಮರಿಗೆ ಆಸರೆ ನೀಡಲು ಪರಿಶ್ರಮಿಸಿದ್ದು ಮತ್ತು ಅಲ್ಲಾಹನ ಮಾರ್ಗದಲ್ಲಿ ತಮ್ಮ ಸಂಪತ್ತು ಹಾಗೂ ಜೀವವನ್ನು ತ್ಯಾಗ ಮಾಡಿದ್ದು ಇದಕ್ಕೆ ಕಾರಣವಾಗಿದೆ. ಅವರನ್ನು ದ್ವೇಷಿಸುವುದು ಕಾಪಟ್ಯದ ಚಿಹ್ನೆಯಾಗಿದೆ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿವರಿಸುವುದೇನೆಂದರೆ, ಅನ್ಸಾರ್‌ಗಳನ್ನು ಪ್ರೀತಿಸಿದವರನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಅವರನ್ನು ದ್ವೇಷಿಸಿದವರನ್ನು ಅಲ್ಲಾಹು ದ್ವೇಷಿಸುತ್ತಾನೆ.

فوائد الحديث

ಈ ಹದೀಸ್ ಅನ್ಸಾರ್‌ಗಳ ಮಹಾ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ಏಕೆಂದರೆ ಅವರನ್ನು ಪ್ರೀತಿಸುವುದು ಸತ್ಯವಿಶ್ವಾಸದ ಚಿಹ್ನೆಯಾಗಿದೆ ಮತ್ತು ಕಾಪಟ್ಯದ ವಿಮುಕ್ತತೆಯಾಗಿದೆ.

ಅಲ್ಲಾಹನ ಮಿತ್ರರನ್ನು ಪ್ರೀತಿಸುವುದು ಮತ್ತು ಅವರನ್ನು ಬೆಂಬಲಿಸುವುದು ಅಲ್ಲಾಹನ ಪ್ರೀತಿ ದೊರೆಯಲು ಕಾರಣವಾಗುತ್ತದೆ.

ಇಸ್ಲಾಂ ಧರ್ಮದ ಆರಂಭಿಕ ಅನುಯಾಯಿಗಳ ಶ್ರೇಷ್ಠತೆಯನ್ನು ತಿಳಿಸಲಾಗಿದೆ.

التصنيفات

Branches of Faith, Merit of the Companions