“ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ…

“ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ ಮುಳ್ಳು ಚುಚ್ಚಿದರೂ ಸಹ, ಅದಕ್ಕೆ ಪರಿಹಾರವಾಗಿ ಅಲ್ಲಾಹು ಅವನ ಕೆಲವು ಪಾಪಗಳನ್ನು ಅಳಿಸದೆ ಇರುವುದಿಲ್ಲ.”

ಅಬೂ ಸಈದ್ ಖುದ್ರಿ ಮತ್ತು ಅಬೂ ಹುರೈರ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ ಮುಳ್ಳು ಚುಚ್ಚಿದರೂ ಸಹ, ಅದಕ್ಕೆ ಪರಿಹಾರವಾಗಿ ಅಲ್ಲಾಹು ಅವನ ಕೆಲವು ಪಾಪಗಳನ್ನು ಅಳಿಸದೆ ಇರುವುದಿಲ್ಲ.”

[صحيح] [متفق عليه]

الشرح

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಮುಸಲ್ಮಾನರಿಗೆ ಸಂಭವಿಸುವ ರೋಗಗಳು, ಚಿಂತೆಗಳು, ದುಃಖಗಳು, ಕಷ್ಟಗಳು ಮತ್ತು ತೊಂದರೆಗಳು—ಅದು ಕೇವಲ ಮುಳ್ಳು ಚುಚ್ಚಿ ಉಂಟಾಗುವ ನೋವಾದರೂ ಸಹ—ಅವು ಅವರ ಪಾಪಗಳನ್ನು ಪರಿಹರಿಸುತ್ತವೆ ಮತ್ತು ಅವರ ದುಷ್ಕೃತ್ಯಗಳನ್ನು ಅಳಿಸುತ್ತವೆ.

فوائد الحديث

ಅಲ್ಲಾಹನ ಉದಾರತೆ ಮತ್ತು ಕರುಣೆಯನ್ನು ವಿವರಿಸಲಾಗಿದೆ. ಏಕೆಂದರೆ, ಅವನು ತನ್ನ ಸತ್ಯವಿಶ್ವಾಸಿ ದಾಸರಿಗೆ ಸಂಭವಿಸುವ ಸಣ್ಣದೊಂದು ತೊಂದರೆಗಾಗಿಯೂ ಅವರ ಪಾಪಗಳನ್ನು ಕ್ಷಮಿಸುತ್ತಾನೆ.

ಮುಸ್ಲಿಮರು ತಮಗೆ ಸಂಭವಿಸುವ ತೊಂದರೆಗಳಿಗೆ ಅಲ್ಲಾಹನಿಂದ ಪ್ರತಿಫಲವನ್ನು ಅಪೇಕ್ಷಿಸಬೇಕು ಮತ್ತು ಎಲ್ಲಾ ರೀತಿಯ ಸಣ್ಣ ಮತ್ತು ದೊಡ್ಡ ಸಂಕಟಗಳನ್ನು ಸಹಿಸಿಕೊಳ್ಳಬೇಕು. ಏಕೆಂದರೆ ಅದು ಅವರ ಪದವಿಯನ್ನು ಹೆಚ್ಚಿಸುತ್ತದೆ ಮತ್ತು ಅವರ ಪಾಪಗಳನ್ನು ನಿವಾರಿಸುತ್ತದೆ.

التصنيفات

Excellence of Monotheism