إعدادات العرض
ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ…
ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು
ಮಅದಾನ್ ಬಿನ್ ಅಬೂ ತಲ್ಹ ಯಅಮರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸ್ವತಂತ್ರಗೊಳಿಸಿದ ಗುಲಾಮನಾದ ಸೌಬಾನ್‌ರನ್ನು ಭೇಟಿಯಾಗಿ ಹೇಳಿದೆ: ನನಗೆ ಒಂದು ಕರ್ಮವನ್ನು ತಿಳಿಸಿಕೊಡಿ. ನಾನು ಅದನ್ನು ಮಾಡಿದರೆ ಅದರ ಮೂಲಕ ಅಲ್ಲಾಹು ನನ್ನನ್ನು ಸ್ವರ್ಗಕ್ಕೆ ಪ್ರವೇಶಗೊಳಿಸಬೇಕು. ಅಥವಾ ನಾನು ಹೀಗೆ ಹೇಳಿದೆ: ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮವನ್ನು ತಿಳಿಸಿಕೊಡಿ. ಅವರು ಮೌನವಾದರು. ನಾನು ಪುನಃ ಕೇಳಿದೆ. ಆದರೆ ಅವರು ಮೌನವಾದರು. ನಾನು ಮೂರನೇ ಬಾರಿ ಕೇಳಿದಾಗ ಅವರು ಹೇಳಿದರು: ನಾನು ಇದೇ ವಿಷಯವನ್ನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದ್ದೆ. ಆಗ ಅವರು ಹೀಗೆ ಉತ್ತರಿಸಿದರು: "ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು." ಮಅದಾನ್ ಹೇಳಿದರು: ನಂತರ ನಾನು ಅಬೂ ದರ್ದಾಅ್‌ರನ್ನು ಭೇಟಿಯಾಗಿ ಇದೇ ಪ್ರಶ್ನೆಯನ್ನು ಕೇಳಿದೆ. ಅವರು ಕೂಡ ಸೌಬಾನ್ ಹೇಳಿದಂತೆಯೇ ಹೇಳಿದರು.
الترجمة
العربية বাংলা Bosanski English Español فارسی Français Bahasa Indonesia Русский Tagalog Türkçe اردو 中文 हिन्दी Tiếng Việt සිංහල Hausa Kurdî Kiswahili Português தமிழ் دری অসমীয়া አማርኛ Svenska ไทย Yorùbá Кыргызча ગુજરાતી नेपाली Română മലയാളം Nederlands Oromoo తెలుగు پښتو Soomaali Kinyarwanda Malagasy Српскиالشرح
ಸ್ವರ್ಗ ಪ್ರವೇಶಕ್ಕೆ ಕಾರಣವಾಗುವ ಅಥವಾ ಅಲ್ಲಾಹನಿಗೆ ಅತ್ಯಂತ ಇಷ್ಟವಾದ ಒಂದು ಕರ್ಮದ ಬಗ್ಗೆ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಲಾಯಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಶ್ನೆ ಕೇಳಿದವನಿಗೆ ಹೀಗೆ ಉತ್ತರಿಸಿದರು: ಅಲ್ಲಾಹನಿಗೆ ಅತ್ಯಧಿಕ ಸುಜೂದ್ ಮಾಡುವ ಪರಿಪಾಠವನ್ನಿಟ್ಟುಕೋ. ಏಕೆಂದರೆ ನೀನು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿನಗೆ ಒಂದು ಸ್ಥಾನವನ್ನು ಏರಿಸುವನು ಮತ್ತು ನಿನ್ನ ಒಂದು ಪಾಪವನ್ನು ಕ್ಷಮಿಸುವನು."فوائد الحديث
ಕಡ್ಡಾಯ ಮತ್ತು ಐಚ್ಛಿಕ ನಮಾಝ್‌ಗಳನ್ನು ನಿರ್ವಹಿಸಲು ಉತ್ಸಾಹ ತೋರಬೇಕೆಂದು ಮುಸಲ್ಮಾನರನ್ನು ಪ್ರೋತ್ಸಾಹಿಸಲಾಗಿದೆ. ಏಕೆಂದರೆ ಅದು ಸುಜೂದ್‌ಗಳನ್ನು ಒಳಗೊಂಡಿದೆ.
ಅಲ್ಲಾಹನ ಕರುಣೆಯನ್ನು ಬಿಟ್ಟರೆ, ಕರ್ಮಗಳ ಮೂಲಕವಲ್ಲದೆ ಸ್ವರ್ಗವನ್ನು ಗಳಿಸಲು ಸಾಧ್ಯವಿಲ್ಲ ಎಂದು ಸಹಾಬಿಗಳು ಅರ್ಥಮಾಡಿಕೊಂಡಿದ್ದರೆಂದು ವಿವರಿಸಲಾಗಿದೆ.
ನಮಾಝಿನಲ್ಲಿ ಸುಜೂದ್ ಮಾಡುವುದು ಸ್ಥಾನಮಾನಗಳು ಏರಲು ಮತ್ತು ಪಾಪಗಳು ಕ್ಷಮಿಸಲ್ಪಡಲು ಅತಿದೊಡ್ಡ ಕಾರಣವಾಗಿದೆ.
التصنيفات
Virtue of Prayer