ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ

ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ."

[Sahih/Authentic.] [At-Tirmidhi]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ತನ್ನ ಮುಸಲ್ಮಾನ ಸಹೋದರನ ಬಗ್ಗೆ ಯಾರಾದರೂ ದೂಷಣೆ ಮಾಡುವುದನ್ನು ಕೇಳುವಾಗ, ಆ ದೂಷಣೆಯನ್ನು ಅಥವಾ ಕೆಟ್ಟ ಮಾತುಗಳನ್ನು ತಡೆಯುವ ಮೂಲಕ ಯಾರು ಅವನ ಘನತೆಯನ್ನು ಕಾಪಾಡುತ್ತಾನೋ, ಅವನನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದ ಶಿಕ್ಷೆಯಿಂದ ಕಾಪಾಡುತ್ತಾನೆ.

فوائد الحديث

ಮುಸಲ್ಮಾನರ ಘನತೆಗೆ ಚ್ಯುತಿ ತರುವ ಮಾತುಗಳನ್ನು ಆಡುವುದನ್ನು ಈ ಹದೀಸ್ ವಿರೋಧಿಸುತ್ತದೆ.

ಪ್ರತಿಫಲವು ಕರ್ಮದ ಅದೇ ವರ್ಗಕ್ಕೆ ಸೇರಿರುತ್ತದೆ، ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನನ್ನು ಅಲ್ಲಾಹು ನರಕದಿಂದ ಕಾಪಾಡುತ್ತಾನೆ.

ಇಸ್ಲಾಂ ಧರ್ಮವು ಅದರ ಅನುಯಾಯಿಗಳ ನಡುವೆ ಸಹೋದರತೆ ಮತ್ತು ಸಹಾಯ-ಸಹಕಾರಗಳನ್ನು ಪ್ರೋತ್ಸಾಹಿಸುವ ಧರ್ಮವಾಗಿದೆ.