ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು…

ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."

[Sahih/Authentic.] [Muslim]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಮಾತು ಮತ್ತು ನಡವಳಿಕೆಯಲ್ಲಿ ಮೃದುತ್ವ, ಸೌಮ್ಯಭಾವ ಮತ್ತು ಸಾವಧಾನತೆಯಿದ್ದರೆ ಅದು ಮಾತು ಮತ್ತು ನಡವಳಿಕೆಗಳ ಸೌಂದರ್ಯ, ಪರಿಪೂರ್ಣತೆ ಮತ್ತು ಅಂದವನ್ನು ಹೆಚ್ಚಿಸುತ್ತದೆ ಮತ್ತು ಅವುಗಳಿಂದ ಆ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಮೃದುತ್ವದ ಅಭಾವವು ವಿಷಯಗಳನ್ನು ದೋಷಪೂರಿತ ಮತ್ತು ಅಹಿತಕರಗೊಳಿಸುತ್ತದೆ. ಇದರಿಂದ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುವುದಿಲ್ಲ. ಅವನು ಅದನ್ನು ಪಡೆದರೂ ಬಹಳ ಕಷ್ಟದಿಂದಲೇ ಪಡೆಯುತ್ತಾನೆ.

فوائد الحديث

ಮೃದುತ್ವದ ಗುಣವನ್ನು ಅಳವಡಿಸಿಕೊಳ್ಳಲು ಈ ಹದೀಸ್ ಪ್ರೋತ್ಸಾಹಿಸುತ್ತದೆ.

ಮೃದುತ್ವವು ವ್ಯಕ್ತಿತ್ವವನ್ನು ಅಂದಗೊಳಿಸುತ್ತದೆ. ಅದು ಇಹಲೋಕ ಮತ್ತು ಪರಲೋಕದ ಎಲ್ಲಾ ಒಳಿತುಗಳಿಗೂ ಕಾರಣವಾಗುತ್ತದೆ.