ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು."

[Sahih/Authentic.] [Al-Bukhari and Muslim]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಪರಿಪೂರ್ಣವಾದ ನಡವಳಿಕೆಯನ್ನು ಹೊಂದಿದ್ದರು. ಉತ್ತಮ ರೀತಿಯಲ್ಲಿ ಮಾತನಾಡುವುದು, ಜನರಿಗೆ ಒಳಿತು ಮಾಡುವುದು, ಮಂದಹಾಸ ಬೀರುವುದು, ಜನರಿಗೆ ತೊಂದರೆ ಕೊಡದಿರುವುದು, ಜನರಿಂದ ಉಂಟಾಗುವ ತೊಂದರೆಗಳನ್ನು ಸಹಿಸುವುದು ಮುಂತಾದ ಎಲ್ಲಾ ಉತ್ತಮ ನಡವಳಿಕೆಗಳಲ್ಲೂ ಅವರು ಮುಂಚೂಣಿಯಲ್ಲಿದ್ದರು.

فوائد الحديث

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ನಡವಳಿಕೆಯ ಸಂಪೂರ್ಣತೆಯನ್ನು ಈ ಹದೀಸ್ ತಿಳಿಸುತ್ತದೆ.

ಉತ್ತಮ ನಡವಳಿಕೆಯಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪರಿಪೂರ್ಣ ಮಾದರಿಯಾಗಿದ್ದಾರೆಂದು ಈ ಹದೀಸ್ ತಿಳಿಸುತ್ತದೆ.

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತಮ ನಡವಳಿಕೆಯನ್ನು ಅನುಕರಿಸಬೇಕೆಂದು ಈ ಹದೀಸ್ ಒತ್ತಾಯಿಸುತ್ತದೆ.