ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ…

ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇವೆ ಮಾಡಲು ಸನ್ನದ್ಧರಾಗಿದ್ದೇವೆ." ಅವನು ಕೇಳುವನು: "ನಿಮಗೆ ತೃಪ್ತಿಯಾಗಿದೆಯೇ?" ಅವರು ಉತ್ತರಿಸುವರು: "ನಮಗೆ ತೃಪ್ತಿಯಾಗದಿರಲು ಹೇಗೆ ಸಾಧ್ಯ? ನೀನಂತೂ ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಅವರು ಉತ್ತರಿಸುವರು: "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇವೆ ಮಾಡಲು ಸನ್ನದ್ಧರಾಗಿದ್ದೇವೆ." ಅವನು ಕೇಳುವನು: "ನಿಮಗೆ ತೃಪ್ತಿಯಾಗಿದೆಯೇ?" ಅವರು ಉತ್ತರಿಸುವರು: "ನಮಗೆ ತೃಪ್ತಿಯಾಗದಿರಲು ಹೇಗೆ ಸಾಧ್ಯ? ನೀನಂತೂ ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ." ಅವನು ಹೇಳುವನು: "ನಾನು ಅದಕ್ಕಿಂತಲೂ ಶ್ರೇಷ್ಠವಾದುದನ್ನು ನಿಮಗೆ ನೀಡುವೆನು." ಅವರು ಕೇಳುವರು: "ಓ ನಮ್ಮ ಪರಿಪಾಲಕನೇ! ಇದಕ್ಕಿಂತಲೂ ಶ್ರೇಷ್ಠವಾದುದು ಇನ್ನೇನಿದೆ?" ಅವನು ಉತ್ತರಿಸುವನು: "ನಾನು ನನ್ನ ಸಂತೃಪ್ತಿಯನ್ನು ನಿಮ್ಮ ಮೇಲೆ ಸುರಿಸುವೆನು. ಇನ್ನು ನಾನು ನಿಮ್ಮೊಂದಿಗೆ ಎಂದಿಗೂ ಕೋಪಿಸಿಕೊಳ್ಳಲಾರೆನು."

[صحيح] [متفق عليه]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸ್ವರ್ಗವಾಸಿಗಳು ಸ್ವರ್ಗಕ್ಕೆ ಪ್ರವೇಶಿಸಿದ ನಂತರ ಅಲ್ಲಾಹು ಅವರೊಡನೆ ಕೇಳುವನು: "ಓ ಸ್ವರ್ಗವಾಸಿಗಳೇ!" ಆಗ ಅವರು, "ನಾವು ನಿನಗೆ ಓಗೊಡುತ್ತಿದ್ದೇವೆ ಮತ್ತು ನಿನ್ನ ಸೇವೆ ಮಾಡಲು ಸನ್ನದ್ಧರಾಗಿದ್ದೇವೆ" ಎಂದು ಉತ್ತರ ನೀಡುವರು. ಅವನು ಕೇಳುವನು: "ನಿಮಗೆ ತೃಪ್ತಿಯಾಗಿದೆಯೇ?" ಅವರು ಉತ್ತರಿಸುವರು: "ಹೌದು ನಮಗೆ ತೃಪ್ತಿಯಾಗಿದೆ. ನಮಗೆ ತೃಪ್ತಿಯಾಗದಿರಲು ಹೇಗೆ ಸಾಧ್ಯ? ನೀನಂತೂ ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ." ಅವನು ಹೇಳುವನು: "ನಾನು ಅದಕ್ಕಿಂತಲೂ ಶ್ರೇಷ್ಠವಾದುದನ್ನು ನಿಮಗೆ ನೀಡಲೇ?" ಅವರು ಕೇಳುವರು: "ಓ ನಮ್ಮ ಪರಿಪಾಲಕನೇ! ಇದಕ್ಕಿಂತಲೂ ಶ್ರೇಷ್ಠವಾದುದು ಇನ್ನೇನಿದೆ?" ಅವನು ಉತ್ತರಿಸುವನು: "ನಾನು ನನ್ನ ಶಾಶ್ವತ ಸಂತೃಪ್ತಿಯನ್ನು ನಿಮ್ಮ ಮೇಲೆ ಸುರಿಸುವೆನು. ಇನ್ನು ಮುಂದೆ ನಾನು ನಿಮ್ಮೊಂದಿಗೆ ಎಂದಿಗೂ ಕೋಪಿಸಿಕೊಳ್ಳಲಾರೆನು."

فوائد الحديث

ಸರ್ವಶಕ್ತನಾದ ಅಲ್ಲಾಹು ಸ್ವರ್ಗವಾಸಿಗಳೊಡನೆ ಮಾತನಾಡುತ್ತಾನೆ ಎಂದು ತಿಳಿಸಲಾಗಿದೆ.

ಸ್ವರ್ಗವಾಸಿಗಳಿಗೆ, ಅವರ ಬಗ್ಗೆ ತಾನು ತೃಪ್ತನಾಗಿದ್ದೇನೆ, ಅವರ ಮೇಲೆ ತಾನು ಸಂತೃಪ್ತಿಯನ್ನು ಸುರಿಸುತ್ತೇನೆ ಮತ್ತು ಅವರೊಡನೆ ಎಂದಿಗೂ ಕೋಪಿಸಿಕೊಳ್ಳುವುದಿಲ್ಲವೆಂದು ಅಲ್ಲಾಹು ಶುಭಸುದ್ದಿ ತಿಳಿಸುತ್ತಾನೆಂದು ಹೇಳಲಾಗಿದೆ.

ಸ್ಥಾನಮಾನಗಳಲ್ಲಿ ಮತ್ತು ಪದವಿಗಳಲ್ಲಿ ವ್ಯತ್ಯಾಸಗಳಿದ್ದರೂ ಸಹ ಎಲ್ಲರೂ ಸ್ವರ್ಗದಲ್ಲಿರುವ ವಸ್ತುಗಳ ಬಗ್ಗೆ ಸಂತೃಪ್ತರಾಗಿರುತ್ತಾರೆ. ಏಕೆಂದರೆ, ಎಲ್ಲರೂ ನೀಡುವ ಉತ್ತರ ಒಂದೇ: "ನೀನು ನಿನ್ನ ಸೃಷ್ಟಿಗಳಲ್ಲಿ ಯಾರಿಗೂ ನೀಡದೇ ಇರುವುದನ್ನು ನಮಗೆ ನೀಡಿರುವೆ."

التصنيفات

Oneness of Allah's Names and Attributes, Descriptions of Paradise and Hell